Job 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸೈತಾನನನ್ನು, “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದು ಹೇಳಿದನು.
Kannada BSI Bible 2016
ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸೈತಾನನನ್ನು - ಎಲ್ಲಿಂದ ಬಂದಿ ಎಂದು ಕೇಳಲು ಸೈತಾನನು ಯೆಹೋವನಿಗೆ - ಭೂಲೋಕದಲ್ಲಿ ಸಂಚರಿಸುತ್ತಾ ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.