Job 10:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾರ್ಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.
Kannada BSI Bible 2016
ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ನಾನು ದುರ್ಮಾರ್ಗಿಯಾದರಂತು ನನಗೇನು ಗತಿ! ನಾನು ಸನ್ಮಾರ್ಗಿಯಾದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅಪಮಾನಭರಿತನಾಗಿ ತಲೆಯೆತ್ತಲಾರೆನು.
Kannada Bible (KNCL) BSI 2016
ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ.