Job 10:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ತಲೆಯೆತ್ತಿದರೆ ನೀನು ಸಿಂಹದಂತೆ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ.
Kannada BSI Bible 2016
ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ. ನಿನ್ನ ಅದ್ಭುತಚಮತ್ಕಾರವನ್ನು ತಿರಿಗಿ ನನ್ನಲ್ಲಿ ತೋರಿಸುವಿ.
Kannada Bible (KNCL) BSI 2016
ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ.