Job 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.
Kannada BSI Bible 2016
ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.
Kannada Bible (KNCL) BSI 2016
ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.