Job 11:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ನಿನಗೆ ಜ್ಞಾನದ ರಹಸ್ಯಗಳನ್ನು ತಿಳಿಸಿ ಜ್ಞಾನಕ್ಕೆ ಎರಡು ಮುಖಗಳಿವೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು. ದೇವರು ನಿನಗೆ ತಕ್ಕ ದಂಡನೆಯನ್ನು ವಿಧಿಸಿಲ್ಲವೆಂಬುದು ನಿನಗೆ ತಿಳಿದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!
Kannada BSI Bible 2016
ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!
Kannada Bible (KNCL) BSI 2016
ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ.