Job 12:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಜನಾಂಗಗಳನ್ನು ವೃದ್ಧಿಮಾಡಿ ಬಲಗೊಳಿಸುವನು; ಬಳಿಕ ಅವುಗಳನ್ನು ನಾಶಮಾಡುವನು. ಆತನು ಜನಾಂಗಗಳನ್ನು ವಿಸ್ತಾರವಾಗಿ ಬೆಳೆಯ ಮಾಡುವನು; ನಂತರ ಅವುಗಳನ್ನು ಚದರಿಸಿಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು.
Kannada BSI Bible 2016
ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು.
Kannada Bible (KNCL) BSI 2016
ರಾಷ್ಟ್ರಗಳನ್ನು ಬೆಳೆಸುತ್ತಾನೆ, ಅಳಿಸುತ್ತಾನೆ ಅವುಗಳನ್ನು ಹರಡುತ್ತಾನೆ, ಹೊರದೂಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶಗಳನ್ನು ಬೆಳೆಸುವುದೂ, ದಂಡಿಸುವುದೂ ದೇವರ ಕೈಯಲ್ಲಿದೆ; ದೇಶಗಳನ್ನು ವಿಸ್ತಾರಮಾಡುವುದೂ, ಚದರಿಸುವುದೂ ದೇವರ ಅಧಿಕಾರದಲ್ಲಿದೆ.