Job 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು, ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.
Kannada BSI Bible 2016
ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ.
Kannada Bible (KNCL) BSI 2016
ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;