Job 12:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.
Kannada BSI Bible 2016
ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಾರಿಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಕಳ್ಳರ ಗುಡಾರಗಳಾದರೋ ಸಮೃದ್ಧಿವಾಗಿರುವವು, ಕೈಯಲ್ಲಿರುವದನ್ನೇ ದೇವರನ್ನಾಗಿ ಮಾಡಿಕೊಂಡು ದೇವರನ್ನು ರೇಗಿಸುವವರು ಸುರಕ್ಷಿತರಾಗಿದ್ದಾರೆ.
Kannada Bible (KNCL) BSI 2016
ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಳ್ಳರ ಗುಡಾರಗಳು ವೃದ್ಧಿಯಾಗಿವೆ; ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ.