Job 13:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿರುವೆ. ನಾನಿಡುವ ಪ್ರತಿಯೊಂದು ಹೆಜ್ಜೆಯನ್ನು ನೀನು ಸೂಕ್ಷ್ಮವಾಗಿ ಗಮನಿಸಿ ನನ್ನ ಹೆಜ್ಜೆಗಳಿಗೆ ಮೇರೆಗಳನ್ನು ಹಾಕಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ.
Kannada BSI Bible 2016
ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿದ್ದೀ; ನನ್ನ ದಾರಿಗಳನ್ನೆಲ್ಲಾ ಮಂದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದೀ.
Kannada Bible (KNCL) BSI 2016
ನನ್ನ ಕಾಲುಗಳಿಗೆ ನೀ ಕೋಳವನ್ನು ತೊಡಿಸಿರುವೆ ನನ್ನ ನಡತೆಯನು ದಿಟ್ಟಿಸಿ ನೋಡುತ್ತಿರುವೆ ನನ್ನ ಹೆಜ್ಜೆ ಹೆಜ್ಜೆಯನು ಲೆಕ್ಕಿಸುತ್ತಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ, ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕಿದ್ದೀರಿ; ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡುತ್ತೀರಿ.