Job 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸತ್ತ ಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.
Kannada BSI Bible 2016
ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದುಹೋಗುವ ತನಕ ಅವರು ನಿದ್ರೆತಿಳಿಯುವದಿಲ್ಲ, ಎಬ್ಬಿಸಲ್ಪಡುವದಿಲ್ಲ.
Kannada Bible (KNCL) BSI 2016
ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ.