Job 14:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹರಿಯುವ ನೀರು ಕಲ್ಲುಗಳನ್ನು ಸವೆಯಿಸುವಂತೆಯೂ ನೆಲದ ಮೇಲಿನ ಧೂಳನ್ನು ಪ್ರವಾಹದ ನೀರು ಕೊಚ್ಚಿಕೊಂಡು ಹೋಗುವಂತೆಯೂ ದೇವರೇ, ನೀನು ಮನುಷ್ಯನ ನಿರೀಕ್ಷೆಯನ್ನು ನಾಶಮಾಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರು ಕಲ್ಲುಗಳನ್ನು ಸವೆಯಿಸುವುದು, ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.
Kannada BSI Bible 2016
ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಕಲ್ಲುಗಳನ್ನು ಸವೆಯಿಸುವದು, ಜಲಪ್ರವಾಹಗಳು ಭೂವಿುಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.
Kannada Bible (KNCL) BSI 2016
ಕಲ್ಲುಗಳನ್ನು ನೀರು ಸವೆಸುವಂತೆ ನೆಲದ ಮಣ್ಣನು ಪ್ರವಾಹ ಕೊಚ್ಚುವಂತೆ ಭಂಗವಾಗುವುದು ಮಾನವನ ನಿರೀಕ್ಷೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರು ಕಲ್ಲುಗಳನ್ನು ಸವೆಯಿಸುವಂತೆಯೂ, ಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವಂತೆಯೂ, ಮನುಷ್ಯನ ನಿರೀಕ್ಷೆಯನ್ನು ನೀವು ನಾಶಮಾಡುತ್ತೀರಿ.