Job 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಮಕ್ಕಳಿಗೆ ಸನ್ಮಾನವಾದರೂ ಅವನಿಗೆ ತಿಳಿಯುವುದಿಲ್ಲ; ಅವರಿಗೆ ಅವಮಾನವಾದರೂ ಅವನಿಗೆ ಅದರ ಅರಿವೇ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.
Kannada BSI Bible 2016
ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮಕ್ಕಳು ಘನತೆಯನ್ನು ಹೊಂದುವದು ಅವನಿಗೆ ತಿಳಿಯುವದಿಲ್ಲ. ಅವರು ಕುಂದಿಹೋಗುವಾಗಲೂ ಅವರ ಸ್ಥಿತಿಯು ಅವನಿಗೆ ಗೋಚರವಾಗುವದಿಲ್ಲ.
Kannada Bible (KNCL) BSI 2016
ಅವನ ಮಕ್ಕಳು ಪ್ರಗತಿಹೊಂದಿದರೂ ಅವನಿಗೆ ತಿಳಿಯದು ಅವರು ಅಧೋಗತಿಗೆ ಇಳಿದರೂ ಅವನಿಗೆ ಗೋಚರವಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ.