Job 15:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು ಎಷ್ಟೋ ಅಶುದ್ಧನಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!
Kannada BSI Bible 2016
ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!
Kannada Bible (KNCL) BSI 2016
ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು, ದೇವರ ದೃಷ್ಟಿಯಲ್ಲಿ ಎಷ್ಟು ಅಲ್ಪನೂ ಅಶುದ್ಧನೂ ಆಗಿದ್ದಾನಲ್ಲವೇ?