Job 15:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
Kannada BSI Bible 2016
ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
Kannada Bible (KNCL) BSI 2016
ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.