Job 15:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.
Kannada BSI Bible 2016
ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ರೊಟ್ಟಿ ಎಲ್ಲಿ ಎಂದು ಹುಡುಕುತ್ತಾ ಅಲೆದಾಡುವೆನೆಂಬದಾಗಿಯೂ ನಿಶ್ಚಯಿಸಿಕೊಂಡು ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.
Kannada Bible (KNCL) BSI 2016
ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.