Job 15:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.
Kannada BSI Bible 2016
ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಿಗೆ ಎದುರು ನಿಂತು ಶೂರನಂತೆ ಮೆರೆದನಲ್ಲಾ.
Kannada Bible (KNCL) BSI 2016
ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ, ಸರ್ವಶಕ್ತರ ಎದುರು ನಿಂತು ಶೂರನಂತೆ ಮೆರೆದನಲ್ಲಾ.