Job 15:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.
Kannada BSI Bible 2016
ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥವನು ಐಶ್ವರ್ಯವಂತನಾಗುವದಿಲ್ಲ, ಅವನ ಆಸ್ತಿಯು ನಿಲ್ಲುವದಿಲ್ಲ, ಅವನ ಫಲವು ಭಾರದಿಂದ ಭೂವಿುಯ ಕಡೆಗೆ ಬಾಗುವದಿಲ್ಲ.
Kannada Bible (KNCL) BSI 2016
ಇಂಥವನು ಸಿರಿವಂತನಾಗಿ ಉಳಿಯನು ಅವನ ಆಸ್ತಿ ಸ್ಥಿರವಾಗಿ ನಿಲ್ಲದು ಅವನು ಧರೆಯಲ್ಲಿ ಬೇರೂರಿ ಬೆಳೆಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ; ಅವನ ಸೊತ್ತು ಭೂಮಿಯ ಮೇಲೆ ವಿಸ್ತಾರವಾಗುವುದಿಲ್ಲ.