Job 15:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಿನ್ನ ಮಾರ್ಗದಲ್ಲಿ ಹೋಗುವುದಾದರೆ, ದೇವರಲ್ಲಿ ಯಾರೂ ಭಯಭಕ್ತಿಯಿಡುವುದಿಲ್ಲ; ಆತನಿಗೆ ಯಾರೂ ಪ್ರಾರ್ಥಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.
Kannada BSI Bible 2016
ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡಿ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.
Kannada Bible (KNCL) BSI 2016
ನೀನಾದರೋ ದೇವರ ಭಯಭಕ್ತಿಯನ್ನು ಕೆಡಿಸುತ್ತಿರುವೆ ದೇವರ ಧ್ಯಾನಕ್ಕೆ ಅಡ್ಡಿಬರುತ್ತಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನಾದರೋ ದೇವರ ಭಯಭಕ್ತಿಯನ್ನು ಹಾಳುಮಾಡುತ್ತಿರುವೆ. ದೇವರ ಮೇಲಿನ ಭಕ್ತಿಯನ್ನು ಕಡಿಮೆ ಮಾಡುತ್ತಿರುವೆ.