Job 15:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.
Kannada BSI Bible 2016
ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಪಾಪವೇ ನಿನ್ನ ಬಾಯಿಗೆ [ಮಾತುಗಳನ್ನು] ಕಲಿಸಿಕೊಡುತ್ತದೆ, ಯುಕ್ತಿವಂತರ ಭಾಷೆಯನ್ನು ಆರಿಸಿಕೊಂಡಿದ್ದೀ.
Kannada Bible (KNCL) BSI 2016
ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ.