Job 15:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ತಪ್ಪಿತಸ್ಥನೆಂದು ನಾನು ನಿರೂಪಿಸುವ ಅಗತ್ಯವಿಲ್ಲ. ಯಾಕೆಂದರೆ ನಿನ್ನ ಬಾಯ ಮಾತುಗಳೇ ನಿನ್ನನ್ನು ತಪ್ಪಿತಸ್ಥನೆಂದು ತೋರಿಸುತ್ತವೆ. ನಿನ್ನ ಸ್ವಂತ ತುಟಿಗಳೇ ನಿನ್ನ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.
Kannada BSI Bible 2016
ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಬಾಯೇ, ನಿನ್ನ ತುಟಿಗಳು ಕೂಡಾ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ.
Kannada Bible (KNCL) BSI 2016
ನಾನಲ್ಲ, ನಿನ್ನ ಬಾಯೇ, ನಿನ್ನನು ಅಪರಾಧಿಯನ್ನಾಗಿಸುತ್ತಿದೆ ನಿನ್ನ ತುಟಿಗಳೇ ನಿನಗೆ ವಿರುದ್ಧ ಸಾಕ್ಷಿಕೊಡುತ್ತಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಲ್ಲ, ನಿನ್ನ ಬಾಯಿಯೇ ನಿನ್ನನ್ನು ಖಂಡಿಸುತ್ತದೆ; ಹೌದು, ನಿನ್ನ ತುಟಿಗಳೇ ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.