Job 15:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ನಿನಗೆ ಗೊತ್ತಿರುವುದೆಲ್ಲಾ ನಮಗೂ ಗೊತ್ತಿದೆ. ನಿನಗೆ ಅರ್ಥವಾಗುವುದೆಲ್ಲಾ ನಮಗೂ ಅರ್ಥವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ?
Kannada BSI Bible 2016
ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೆ ತಿಳಿಯದಿರುವ ಯಾವದು ನಿನಗೆ ಗೊತ್ತುಂಟು? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ?
Kannada Bible (KNCL) BSI 2016
ನಮಗೆ ತಿಳಿಯದಿರುವುದು ನಿನಗೆ ತಿಳಿದಿದೆಯೆ? ನಮಗೆ ಅರ್ಥವಾಗದಿರುವುದು ನಿನಗೆ ಅರ್ಥವಾಗಿದೆಯೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ತಿಳಿಯದೆ ಇರುವುದನ್ನು ನೀನು ಏನು ತಿಳಿದುಕೊಂಡಿರುವೆ? ನಮ್ಮಲ್ಲಿ ಇಲ್ಲದ ಯಾವ ಒಳನೋಟವನ್ನು ನೀನು ಅರ್ಥಮಾಡಿಕೊಂಡಿರುವೆ?