Job 16:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಸುಖದಿಂದಿದ್ದಾಗ ದೇವರು ನನ್ನನ್ನು ಜಜ್ಜಿಹಾಕಿದನು; ನನ್ನ ಕತ್ತು ಹಿಡಿದು ನನ್ನನ್ನು ಚೂರುಚೂರು ಮಾಡಿದನು! ದೇವರು ನನ್ನನ್ನು ತನ್ನ ಗುರಿ ಅಭ್ಯಾಸಕ್ಕಾಗಿ ಉಪಯೋಗಿಸುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.
Kannada BSI Bible 2016
ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದುಹಾಕಿದನು; ಕತ್ತು ಹಿಡಿದು ನನ್ನನ್ನು ಚೂರು ಚೂರು ಮಾಡಿದನು. ನನ್ನನ್ನು ಗುರಿಮಾಡಿಕೊಂಡಿದ್ದಾನೆ;
Kannada Bible (KNCL) BSI 2016
ನೆಮ್ಮದಿಯಾಗಿದ್ದ ನನ್ನನು ಒಡೆದು ಬಡಿದುಹಾಕಿದ್ದಾನೆ ಕುತ್ತಿಗೆ ಹಿಸುಕಿ ನನ್ನನು ತುಂಡಾಗಿಸಿದ್ದಾನೆ. ಬಾಣಬಿಡಲು ನನ್ನನು ಗುರಿಹಲಗೆಯಾಗಿಸಿಕೊಂಡಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೆಮ್ಮದಿಯಿಂದ ಇದ್ದಾಗ ದೇವರು ನನ್ನನ್ನು ಚದರಿಸಿದ್ದಾರೆ; ನಾನು ಮಡಕೆ ಒಡೆದುಬಿದ್ದಂತೆ ಇದ್ದೇನೆ. ನನ್ನನ್ನು ತಮಗೆ ಗುರಿ ಹಲಗೆಯಾಗಿ ನಿಲ್ಲಿಸಿಕೊಂಡಿದ್ದಾರೆ.