Job 16:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
Kannada BSI Bible 2016
ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೂ ನಿಮ್ಮ ಹಾಗೆ ಮಾತಾಡಬಲ್ಲೆನು; ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ ನಾನು ನಿಮಗೆ ವಿರುದ್ಧವಾಗಿ ಮಾತುಗಳನ್ನು ಹೊಸೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
Kannada Bible (KNCL) BSI 2016
ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ, ನಾನು ಸಹ ನಿಮ್ಮ ಹಾಗೆ ಮಾತಾಡುತ್ತಿದ್ದೆ; ನಾನು ನಿಮ್ಮ ವಿರುದ್ಧ ಪದಪ್ರಯೋಗಿಸಿ ಮಾತಾಡಬಹುದಾಗಿತ್ತು; ಹೌದು, ನಿಮ್ಮ ವಿಷಯದಲ್ಲಿ ಗೇಲಿ ಮಾಡುತ್ತಾ, ನಾನು ನನ್ನ ತಲೆಯಾಡಿಸಬಹುದಾಗಿತ್ತು.