Job 18:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು.
Kannada BSI Bible 2016
ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಂದಿನವರು ಅವನ [ನಾಶನ] ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು.
Kannada Bible (KNCL) BSI 2016
ಅವನ ಗತಿಯನು ಕೇಳಿ ಚಕಿತಗೊಳ್ವರು ಪಡುವಣದವರು ಅಂತೆಯೇ ಭಯಭ್ರಾಂತರಾಗುವರು ಮೂಡಣದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.