Job 19:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಹೆಂಡತಿಗೂ ನನ್ನ ಉಸಿರು ಅಸಹ್ಯವಾಗಿದೆ. ನನ್ನ ಸ್ವಂತ ಮಕ್ಕಳೂ ನನ್ನನ್ನು ಕಂಡು ಹೇಸಿಗೆಪಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ.
Kannada BSI Bible 2016
ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ ಹೇಸಿಕೆಯಾಗಿದ್ದೇನೆ.
Kannada Bible (KNCL) BSI 2016
ನನ್ನುಸಿರು ನನ್ನ ಧರ್ಮಪತ್ನಿಗೆ ಅಸಹ್ಯವಾಗಿದೆ ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೇ ಹೇಸಿಕೆಯಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಶ್ವಾಸವು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಕುಟುಂಬದವರಿಗೆ ನಾನು ಹೇಸಿಕೆಯಾದೆ.