Job 19:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕೆಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”
Kannada BSI Bible 2016
ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಿಗೆ ಭಯಪಡಿರಿ, ಕತ್ತಿಯ ದಂಡನೆಗಳು ತೀಕ್ಷ್ಣವಾಗಿವೆ; ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.
Kannada Bible (KNCL) BSI 2016
ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.”