Job 19:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ. ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.
Kannada BSI Bible 2016
ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ ನ್ಯಾಯವು ನೆರವೇರದು.
Kannada Bible (KNCL) BSI 2016
‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ; ಗಟ್ಟಿಯಾಗಿ ಮೊರೆಯಿಟ್ಟರೂ ನ್ಯಾಯ ದೊರಕುವುದಿಲ್ಲ.