Job 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.
Kannada BSI Bible 2016
ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತು ಅವನ ಸಂಗಡ ಒಬ್ಬರೂ ಮಾತಾಡದೆಯೇ ಇದ್ದರು.
Kannada Bible (KNCL) BSI 2016
ಯೋಬನು ಅನುಭವಿಸುತ್ತಿದ್ದ ಅಪಾರ ಬಾಧೆಯನ್ನು ನೋಡಿ ಆತನೊಂದಿಗೆ ಏನನ್ನೂ ಮಾತನಾಡದೆ ಏಳು ದಿನಗಳವರೆಗೆ ಹಗಲಿರುಳೂ ಅವನ ಹತ್ತಿರದಲ್ಲೇ ನೆಲದ ಮೇಲೆ ತೆಪ್ಪನೆ ಕುಳಿತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೋಬನು ಅನುಭವಿಸುತ್ತಿದ್ದ ಬಾಧೆಯು ಎಷ್ಟು ಕ್ರೂರವೆಂದು ಅವರು ನೋಡಿ, ಅವನ ಸಂಗಡ ಏಳು ಹಗಲು, ಏಳು ರಾತ್ರಿ ನೆಲದ ಮೇಲೆ ಕುಳಿತುಕೊಂಡಿದ್ದರು. ಒಬ್ಬನಾದರೂ ಒಂದು ಮಾತನ್ನೂ ಯೋಬನಿಗೆ ಹೇಳಲಿಲ್ಲ.