Job 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.
Kannada BSI Bible 2016
ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು.