Job 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
Kannada BSI Bible 2016
ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
Kannada Bible (KNCL) BSI 2016
ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.