Job 20:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ. ಯಾರೂ ಹೊತ್ತಿಸದ ಬೆಂಕಿಯಿಂದ ಅವನು ನಾಶವಾಗುವನು. ಅವನ ಗುಡಾರದಲ್ಲಿ ಉಳಿದಿರುವುದೆಲ್ಲವನ್ನು ಬೆಂಕಿಯು ನಾಶಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.
Kannada BSI Bible 2016
ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದುಬಿಡುವದು.
Kannada Bible (KNCL) BSI 2016
ಅವನ ನಿಧಿನಿಕ್ಷೇಪಕ್ಕಾಗಿ ಕಾರಿರುಳು ಕಾದಿದೆ ಯಾರೂ ಹೊತ್ತಿಸದ ಬೆಂಕಿ ಅವನನು ಕಬಳಿಸಲಿದೆ ಅವನ ಗುಡಾರದಲಿ ಉಳಿದದ್ದೆಲ್ಲ ನಾಶವಾಗಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು.