Job 20:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಮನೆಯಲ್ಲಿರುವ ಪ್ರತಿಯೊಂದನ್ನು ದೇವರ ಕೋಪದ ಪ್ರವಾಹವು ಕೊಚ್ಚಿಕೊಂಡುಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.
Kannada BSI Bible 2016
ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.
Kannada Bible (KNCL) BSI 2016
ಅವನ ಮನೆಯ ಧನಧಾನ್ಯ ಹಾಳಾಗುವುದು ದೇವರ ಸಿಟ್ಟಿನಾದಿನ ನೀರುಪಾಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.