Job 20:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಉತ್ತರಗಳಿಂದ ನೀನು ನಮಗೆ ಅವಮಾನ ಮಾಡಿರುವೆ! ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರ ಕೊಡಬೇಕೆಂಬುದು ನನಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.
Kannada BSI Bible 2016
ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕೆಂದರೆ ನನಗೆ ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.
Kannada Bible (KNCL) BSI 2016
ನನಗೆ ಅವಮಾನ ತರುವ ನಿನ್ನ ಖಂಡನೆಯನು ಕೇಳಿದ್ದೇನೆ ನನ್ನ ಮನ ತನ್ನ ವಿವೇಚನೆ ಕಲಿಸಿದ ಉತ್ತರವನು ತಿಳಿಸುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಅವಮಾನಿಸುವ ಖಂಡನೆಯನ್ನು ನಾನು ಕೇಳಿದ್ದೇನೆ; ಆದ್ದರಿಂದ ನನ್ನ ತಿಳುವಳಿಕೆಯು ನನ್ನನ್ನು ಉತ್ತರಿಸಲು ಪ್ರೇರೇಪಿಸುತ್ತದೆ.