Job 21:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.
Kannada BSI Bible 2016
ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸರ್ವಶಕ್ತನು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆಮಾಡುವದರಿಂದ ಪ್ರಯೋಜನವೇನು? ಎಂದೂ ಹೇಳುತ್ತಿದ್ದರು.
Kannada Bible (KNCL) BSI 2016
‘ಈ ಸರ್ವಶಕ್ತ ಎಷ್ಟರವನು: ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ.