Job 21:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?
Kannada BSI Bible 2016
ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಲ?
Kannada Bible (KNCL) BSI 2016
ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ? ಎಷ್ಟು ಸಾರಿ ವಿಪತ್ತು ಅವರ ಮೇಲೆ ಬರುತ್ತದೆ? ದೇವರು ವೇದನೆಗಳನ್ನು ತಮ್ಮ ಬೇಸರದಿಂದ ಹಂಚುವುದು ಎಷ್ಟು ಸಾರಿ?