Job 21:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮತ್ತೊಬ್ಬನು ಕಷ್ಟಕರವಾದ ಜೀವನದ ನಂತರ ಮನಗುಂದಿದವನಾಗಿ ಸಾಯುವನು. ಅವನು ಯಾವ ಸುಖವನ್ನೂ ಅನುಭವಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.
Kannada BSI Bible 2016
ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನು ಲೇಶವೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಸಾಯುವನು.
Kannada Bible (KNCL) BSI 2016
ಮತ್ತೊಬ್ಬ ಕಿಂಚಿತ್ತೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಪ್ರಾಣಬಿಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ, ಕಹಿಯಾದ ಮನೋವ್ಯಥೆಪಡುತ್ತಾ ಸಾಯುತ್ತಾನೆ.