Job 22:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ನಡತೆಯು ಒಳ್ಳೆಯದಾಗಿದ್ದರೆ, ಅದರಿಂದ ದೇವರಿಗೆ ಸಹಾಯವಾಗುವುದೇ? ಇಲ್ಲ. ನೀನು ನೀತಿವಂತನಾಗಿದ್ದರೆ ಸರ್ವಶಕ್ತನಾದ ದೇವರಿಗೆ ಅದರಿಂದೇನಾದರೂ ಲಾಭವಾಗುವುದೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?
Kannada BSI Bible 2016
ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನೀತಿವಂತನಾಗಿರುವದು ಸರ್ವಶಕ್ತನಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?
Kannada Bible (KNCL) BSI 2016
ನೀನು ಸಜ್ಜನನಾಗಿದ್ದರೆ ಅದರಿಂದ ಸರ್ವಶಕ್ತನಿಗೆ ಸುಖವೇ? ನಿನ್ನ ನಿರ್ದೋಷ ನಡತೆಯಿಂದ ಆತನಿಗೆ ಲಾಭವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು?