Job 23:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಹಾ, ದೇವರ ದರ್ಶನವು ನನಗೆ ಎಲ್ಲಿ ಆಗುವುದು? ಆತನ ಬಳಿಗೆ ನಾನು ಹೇಗೆ ಹೋಗಬೇಕು? ನನಗೆ ಗೊತ್ತಾಗಿದ್ದರೆ ಎಷ್ಟೋ ಮೇಲು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು.
Kannada BSI Bible 2016
ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೇನು.
Kannada Bible (KNCL) BSI 2016
ಆಹಾ! ಆತನ ದರ್ಶನ ನನಗೆ ದೊರಕುವುದೆಲ್ಲಿ? ನಾನು ಸೇರಬಹುದಿತ್ತಲ್ಲಾ ಆತನ ಸನ್ನಿಧಿಯಲ್ಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ.