Job 24:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?
Kannada BSI Bible 2016
ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಶಕ್ತನು ಏಕೆ [ದಂಡನೆಯ] ಕಾಲಗಳನ್ನು ನೇವಿುಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ [ನ್ಯಾಯ ತೀರ್ಪಿನ] ದಿನಗಳು ಏಕೆ ಗೋಚರವಾಗುವದಿಲ್ಲ?
Kannada Bible (KNCL) BSI 2016
ಸರ್ವಶಕ್ತಸ್ವಾಮಿ ಕಾಲರಾಶಿಯನ್ನೇಕೆ ನೇಮಿಸಿಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ದಿನಗಳೇಕೆ ಗೋಚರವಾಗುವುದಿಲ್ಲ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?