Job 24:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.
Kannada BSI Bible 2016
ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತುಂಬಿದ ಪಟ್ಟಣದಲ್ಲಿ ನರಳುವರು, ಗಾಯಪಟ್ಟವರು ಮೊರೆಯಿಡುವರು. ದೇವರಾದರೋ ಅದನ್ನು ಅಯುಕ್ತವೆಂದೆಣಿಸುವದಿಲ್ಲ.
Kannada Bible (KNCL) BSI 2016
ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.