Job 24:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.
Kannada BSI Bible 2016
ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಕಿನ ಮೇಲೆ ತಿರುಗಿಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ ಅದರ ಹಾದಿಗಳಲ್ಲಿ ಇರುವದಿಲ್ಲ.
Kannada Bible (KNCL) BSI 2016
ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.