Job 24:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು.
Kannada BSI Bible 2016
ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
[ನೀವು ಹೇಳುವದೇನಂದರೆ]- ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವದು. ದ್ರಾಕ್ಷೇತೋಟಗಳ ಕಡೆಗೆ ತಿರುಗಲಾರನು.
Kannada Bible (KNCL) BSI 2016
“ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ.