Job 24:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತುಬಿಡುವಳು. ದುಷ್ಟನ ದೇಹವನ್ನು ಹುಳಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು.
Kannada BSI Bible 2016
ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವದು; ಹುಳವು ಅವನ ಹೆಣವನ್ನು ರುಚಿಯಿಂದ ತಿನ್ನುವದು; ಇನ್ನು ಮೇಲೆ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವದು.
Kannada Bible (KNCL) BSI 2016
ಹೆತ್ತಕರುಳೇ ಅವನನು ಮರೆತುಬಿಡುವುದು ಹುಳು ಅವನ ಹೆಣವನು ಆಸೆಯಿಂದ ಕಬಳಿಸುವುದು. ಇನ್ನು ಅವನ ನೆನಪು ಯಾರಿಗೂ ಇರದು ಅಕ್ರಮವು ಮುರಿದುಬಿದ್ದ ಮರದಂತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.