Job 24:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಡವರು ಅಡವಿಯಲ್ಲಿನ ಕಾಡುಕತ್ತೆಗಳೋ ಎಂಬಂತೆ ತಮ್ಮ ಆಹಾರಕ್ಕಾಗಿ ದಿನವೆಲ್ಲಾ ದುಡಿಯುವರು; ಕೂಳೆಬಿಟ್ಟ ಹೊಲಗಳೇ ಅವರ ಮಕ್ಕಳಿಗೆ ಆಹಾರವನ್ನು ಒದಗಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು.
Kannada BSI Bible 2016
ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ ಇವರು ತಮ್ಮ ಹೊಟ್ಟೇಪಾಡಿಗಾಗಿ ಹೊರಟು ಕೂಳನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಕೂಳನ್ನು ಒದಗಿಸುವದು.
Kannada Bible (KNCL) BSI 2016
ಆ ಬಡವರ ಪಾಡು ಅಡವಿಯ ಕಾಡುಕತ್ತೆಗಳಿಗೆ ಸಮಾನ ಹೊಟ್ಟೆಪಾಡಿಗಾಗಿ ಕೂಳನ್ನು ಹುಡುಕುತ್ತಾರೆ ಬೆಳಗಿನಿಂದ ಅವರ ಮಕ್ಕಳಿಗೆ ಆಹಾರ ಒದಗಿಸುತ್ತದೆ ಅರಣ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಡುಕತ್ತೆಗಳ ಹಾಗೆ ಬಡವರು ತಮ್ಮ ಆಹಾರಕ್ಕಾಗಿ ಅಲೆಯುತ್ತಾರೆ; ಪಾಳುಭೂಮಿಯಿಂದ ಅವರಿಗೂ, ಅವರ ಮಕ್ಕಳಿಗೂ ಆಹಾರ ಸಿಗುತ್ತದೆ.