Job 24:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.
Kannada BSI Bible 2016
ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು ಬಡವರಿಂದ ಒತ್ತೆತೆಗೆದುಕೊಳ್ಳುವವರಿದ್ದಾರೆ.
Kannada Bible (KNCL) BSI 2016
ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.