Job 25:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
Kannada BSI Bible 2016
ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ,
Kannada Bible (KNCL) BSI 2016
“ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.