Job 28:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನದ ಬೆಲೆಯು ಯಾರಿಗೂ ಗೊತ್ತಿಲ್ಲ. ಜನರು ನೆಲವನ್ನು ಅಗೆದು ಜ್ಞಾನವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
Kannada BSI Bible 2016
ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಜೀವಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
Kannada Bible (KNCL) BSI 2016
ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.