Job 28:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನವು ಬಂಗಾರಕ್ಕಿಂತಲೂ ಶ್ರೇಷ್ಠವಾದ ಗಾಜಿಗಿಂತಲೂ ಹೆಚ್ಚು ಬೆಲೆಬಾಳುತ್ತದೆ. ಬಂಗಾರದ ಆಭರಣಗಳು ಜ್ಞಾನವನ್ನು ಕೊಂಡುಕೊಳ್ಳಲಾರವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?
Kannada BSI Bible 2016
ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊನ್ನಾಗಲಿ ಗಾಜಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲು ಕೊಡುವದು ಸಾಧ್ಯವೋ?
Kannada Bible (KNCL) BSI 2016
ಹೊನ್ನಾಗಲಿ, ಗಾಜಾಗಲಿ ಅದಕ್ಕೆ ಸಮವಾದೀತೆ? ಚಿನ್ನಾಭರಣಗಳನ್ನು ಅದಕ್ಕೆ ಅದಲುಬದಲು ಮಾಡಿಕೊಡಲಾದೀತೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.