Job 28:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!
Kannada BSI Bible 2016
ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಜ್ಞಾನವಿರುವಲ್ಲಿ] ಹವಳವೂ ಸ್ಪಟಿಕವೂ ನೆನಪಿಗೆ ಬರುವದಿಲ್ಲ. ಮುತ್ತುಗಳನ್ನು ಸಂಪಾದಿಸುವದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವದು ಎಷ್ಟೋ ಕಷ್ಟ!
Kannada Bible (KNCL) BSI 2016
ಸುಜ್ಞಾನವಿರುವಲ್ಲಿ ಹವಳ-ಸ್ಫಟಿಕಗಳು ನೆನಪಿಗೆ ಬಾರವು ಮಾಣಿಕ್ಯಗಳ ಸಂಪಾದನೆಗಿಂತ ಅದರ ಸಂಪಾದನೆ ಶ್ರೇಷ್ಠವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!