Job 28:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು.
Kannada BSI Bible 2016
ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರು ಕತ್ತಲನ್ನು ಹೋಗಲಾಡಿಸಿ ಕಾರ್ಗತ್ತಲಲ್ಲಿಯೂ ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ತನಕ ಹುಡುಕುವರು.
Kannada Bible (KNCL) BSI 2016
ಮಾನವರು ಹೊರದೂಡುತ್ತಾರೆ ಕತ್ತಲನು ಕತ್ತಲು-ಕಾರ್ಗತ್ತಲಲ್ಲೂ ಹುಡುಕುತ್ತಾರೆ ಲೋಹಗಳನು. ತೋಡುತ್ತಿರುತ್ತಾರೆ ಅವು ದೊರಕುವವರೆಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.